

ರಾಣೆಬೆನ್ನೂರ: ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾಥಿರ್ಗಳು ಸೋಮವಾರ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟಿಸಿ ಗ್ರೇಡ್&-2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡ ಕೂಲಿ ಕಾಮಿರ್ಕರು, ಮಧ್ಯಮ ವರ್ಗದ ಜನತೆಗೆ ಹೊರೆ ಮಾಡಿದೆ. ಸರ್ಕಾರಿ ಬಸ್ಗಳನ್ನೇ ಅವಲಂಬಿಸಿ ಸಾವಿರಾರು ಜನ ನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ.
ಆದರೆ, ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಳ ಮಾಡುವುದರ ಮೂಲಕ ಆಥಿರ್ಕ ಹೊರೆಯನ್ನು ಜನಸಾಮಾನ್ಯರ ಮೇಲೆ ಹಾಕುತ್ತಿದೆ. ಬಸ್ಗಳ ಸಂಖ್ಯೆ ಹೆಚ್ಚಿಸಬೇಕೆ ಹೊರತು ಪ್ರಯಾಣ ದರವನ್ನಲ್ಲ. ಶಕ್ತಿ ಯೋಜನೆಯಿಂದಾಗಿ ನಿತ್ಯ ಬಸ್ಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕೆ ಇದೆ.
ಆದರೆ, ಅದಕ್ಕೆ ತಕ್ಕಂತೆ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ನಿತ್ಯ ಶಾಲಾ-&ಕಾಲೇಜಿಗೆ ಹೋಗುವ ವಿದ್ಯಾಥಿರ್ಗಳಿಗೆ ತೊಂದರೆಯನ್ನುಂಟು ಮಾಡುತ್ತಿದೆ. ವಿದ್ಯಾಥಿರ್ಗಳ ಶಾಲಾ-&ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಹಲವಾರು ಬಸ್ಗಳಲ್ಲಿ ಸ್ಥಳಾವಕಾಶ ಇಲ್ಲದೆ ಬಸ್ಗಳನ್ನು ನಿಲ್ಲಿಸಿದ ಪರಿಸ್ಥಿತಿ ನಿಮಾರ್ಣವಾಗುತ್ತಿದೆ. ಇದರಿಂದ ವಿದ್ಯಾಥಿರ್ಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ, ಸರ್ಕಾರ ಕೂಡಲೇ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿ ವಿದ್ಯಾಥಿರ್ಗಳ ಹಾಗೂ ಜನ ಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ರಾಜ್ಯ ಸಹ ಕಾರ್ಯದಶಿರ್ ಅಭಿಷೇಕ್ ದೊಡ್ಮನಿ, ರಾಜ್ಯ ಕಾರ್ಯಕಾರಣಿ ಸದಸ್ಯ ಅಭಿಲಾಷ ಬಾದಾಮಿ, ನಗರ ಕಾರ್ಯದಶಿರ್ ಪವನಕುಮಾರ ಇಟಗಿ, ಸಹ ಕಾರ್ಯದಶಿರ್ ಎಲ್ಲಮ್ಮ ಎಂ., ಸವಿತಾ, ವೈಷ್ಣವಿ, ಶ್ರುತಿ ಎಂ., ನಂದೀಶ ಪೂಜಾರಿ, ನವೀನ ಜಿ.ಕೆ., ಬಸವರಾಜ, ಭರತಕುಮಾರ, ಆಕಾಶ ಮತ್ತಿತರರು ಇದ್ದರು.