ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

abvp protest
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಚ್.ಕೆ.ಪ್ರವೀಣ್, ರವಿ, ಸಚಿನ್, ಅಭಿ, ಲೋಹಿತ್, ದರ್ಶನ್, ಹರ್ಷಿತಾ, ಪವಿತ್ರಾ, ಯಶಸ್ವಿನಿ ಇದ್ದರು.
Published on

ಶಿವಮೊಗ್ಗ: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆ ಆಲಿಸಿ ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಅವರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡಬೇಕು. ಸರ್ಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ಸಂಬಳ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಬೇಕು. ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರೆಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರ ಹಿಂಪಡೆದು ಪಾಠ ಪ್ರವಚನ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ರಾಜ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್, ರವಿ, ಸಚಿನ್, ಅಭಿ, ಲೋಹಿತ್, ದರ್ಶನ್, ಹರ್ಷಿತಾ, ಪವಿತ್ರಾ, ಯಶಸ್ವಿನಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net