ಅನುಚಿತ ವರ್ತನೆ ಖಂಡಿಸಿ ಎಬಿವಿಪಿ ಪ್ರತಿಭಟನೆ

abvp
ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಉಪನ್ಯಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎಬಿವಿಪಿಯ ಯಶಸ್ವಿನಿ, ಲೋಹಿತ್, ರಂಜನಿ, ರವಿ, ವರುಣ್ ಮುಂತಾದವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಉಪನ್ಯಾಸಕರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದರು.

ಉಪನ್ಯಾಸಕರೊಬ್ಬರು ಕಳೆದ ಕೆಲ ದಿನಗಳಿಂದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆ ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೂ ದೂರು ನೀಡಿದ್ದಾಳೆ. ಸೆ.3ರಂದು ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ತಿಳಿಸಿದರು.
ಇಷ್ಟೆಲ್ಲಾ ಬೆಳವಣಿಗೆಗಳು ನಡೆದು 15 ದಿನಗಳು ಕಳೆದರೂ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯಿಂದ ಉಪನ್ಯಾಸಕರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹಲವು ವಿದ್ಯಾರ್ಥಿನಿಯರ ಜತೆ ಇದೇ ಉಪನ್ಯಾಸಕರು ಅನುಚಿತ ವರ್ತನೆ ತೋರಿದ್ದು, ಅವರ‌್ಯಾರು ದೂರು ನೀಡಲು ಮುಂದೆ ಬಂದಿರಲಿಲ್ಲ. ಈಗ ಓರ್ವ ವಿದ್ಯಾರ್ಥಿನಿ ಧೈರ್ಯ ಮಾಡಿ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನುಚಿತವಾಗಿ ವರ್ತಿಸಿದ ಉಪನ್ಯಾಸಕರನ್ನು ಅಮಾನತು ಮಾಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಇಲ್ಲದೇ ಇದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
ಎಬಿವಿಪಿ ಮುಖಂಡರಾದ ಯಶಸ್ವಿನಿ, ಲೋಹಿತ್, ಅಕ್ಷಯ್, ವರುಣ್, ರವಿ, ರಂಜನಿ ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net