ಮೂರನೇ ಬಾರಿಗೆ ಶಿವಮೊಗ್ಗದಲ್ಲಿ ಎಬಿವಿಪಿ ಪ್ರಾಂತ ಸಮ್ಮೇಳನ

nagaraj
ಎಸ್.ಎನ್.ನಾಗರಾಜ್
Published on

ಶಿವಮೊಗ್ಗ: ರಾಷ್ಟ್ರೀಯ ಜ್ಞಾನ, ಆಧ್ಯಾತ್ಮಿಕ ಚಾರಿತ್ರೃ, ಏಕತೆ ಆಧಾರದ ಮೇಲೆ ವ್ಯಕ್ತಿ ನಿರ್ಮಾಣ ಮಾಡುತ್ತಿರುವ ಎಬಿವಿಪಿಯು ಶೈಕ್ಷಣಿಕ ಕ್ಷೇತ್ರದಲ್ಲಿ ಪರಿವರ್ತನೆಗಳಿಗೆ ಕಾರಣವಾಗಿದೆ. 75 ವರ್ಷ ಇತಿಹಾಸವಿರುವ ವಿಶ್ವದ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ವಿದ್ಯಾರ್ಥಿ ಸಂಘಟನೆಯೊಂದರ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಎಬಿವಿಪಿ ದಕ್ಷಿಣ ಪ್ರಾಂತ ಸಮ್ಮೇಳನ ಸ್ವಾಗತಿ ಸಮಿತಿ ಅಧ್ಯಕ್ಷ ಎಸ್.ಎನ್.ನಾಗರಾಜ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಜ.31ರಿಂದ ಫೆ.2ರವರೆಗೆ ಎಬಿವಿಪಿ ದಕ್ಷಿಣ ಪ್ರಾಂತ ಸಮ್ಮೇಳನ ನಡೆಯಲಿದೆ. ಮೂರು ದಿನಗಳ ಸಮ್ಮೇಳನದಲ್ಲಿ ಧ್ವಜಾರೋಹಣ, ಶೈಕ್ಷಣಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ಅನೇಕ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಜರುಗಲಿದೆ. ಯುವ ಸಾಧಕರೊಂದಿಗೆ ಸಂವಾದ ನಡೆಯಲಿದೆ. ಸಮ್ಮೇಳನದ ಅಂತ್ಯದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಬಿವಿಪಿ ರಾಜ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಜೆ.ಹೇಮಂತ್, ಸಂಚಾಲಕ ರಾಜೇಶ್ ಶಾಸ್ತ್ರಿ, ಸದಸ್ಯರಾದ ಅಶೋಕ ಜಿ. ಭಟ್ಟ, ಅನಂತದತ್ತ, ಲಕ್ಷ್ಮೀದೇವಿ ಗೋಪಿನಾಥ್, ಪವಿತ್ರಾ ಮುರಳಿ, ಡಾ. ರಂಜನಿ ಬಿದರಹಳ್ಳಿ, ರಮೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net