

ಬೆಂಗಳೂರು: ನೆಟ್‌ವರ್ಕ್ ಸಮಸ್ಯೆಯಿಂದಾಗಿ ಆನ್‌ಲೈನ್ ತರಗತಿಯಿಂದ ವಂಚಿತರಾಗಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲಾಕ್‌ಡೌನ್ ಮುಗಿದ ನಂತರ 20ರಿಂದ 25 ದಿನಗಳ ಕಾಲ ಪುನರಾವರ್ತನಾ ತರಗತಿಗಳನ್ನು ನಡೆಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರ ಬಳಿ ಮನವಿ ಮಾಡಿದ್ದಾರೆ.
ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಡಾ.ಅಶ್ವತ್ಥನಾರಾಯಣ ಅವರ ಜತೆ ಶನಿವಾರ ಚರ್ಚೆ ನಡೆಸಿದ ಎಬಿವಿಪಿ ಸದಸ್ಯರು ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಎಬಿವಿಪಿ ಸಲ್ಲಿಸಿರುವ ಸಲಹೆ ಹಾಗೂ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಭರವಸೆ ನೀಡಿದರು.
"ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವಾಸ್ತವ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿದ ಬಳಿಕ ಶಿಕ್ಷಣ ತಜ್ಞರು, ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೆಲ ಬೇಡಿಕೆ ಹಾಗೂ ಸಲಹೆಗಳನ್ನು ಮುಂದಿಟ್ಟಿರುವುದಾಗಿ," ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ಸಿಗರಿಗೆ ಶಾಕ್ ನೀಡಿದ ಜಾರಿ ನಿರ್ದೇಶನಾಲಯ! ಎಬಿವಿಪಿ ಸಲಹೆ-ಬೇಡಿಕೆಗಳು