ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ ಆಯೇಷಖಾನಂ ಅಧಿಕಾರ ಸ್ವೀಕಾರ

Published on

ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧಿಕಾರ ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಸಮ್ಮುಖದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸದಸ್ಯರಾದ ಕೆ.ವೆಂಕಟೇಶ್, ಎಂ.ಎನ್.ಅಹೋಬಲಪತಿ ಅವರು ಹಾಜರಿದ್ದರು.
ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ನಿವೃತ್ತ ಅಧಿಕಾರಿಗಳಾದ ಬಿ.ಆರ್.ಮಮತಾ, ಎಚ್.ಬಿ.ದಿನೇಶ್, ಕೆಯುಡಬ್ಲೂೃಜೆ ಅಧ್ಯಕ್ಷ ಶಿವಾನಂದ ತಗಡೂರು, ಮಹಿಳಾ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮ ಶಿವಮೊಗ್ಗ, ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಸದಾಶಿವ ಶೆಣೈ, ಪೊನ್ನಪ್ಪ, ಪ್ರೆಸ್ ಕ್ಲಬ್‌ನ ಶಿವಕುಮಾರ್ ಬೆಳ್ಳಿತಟ್ಟೆ ಸೇರಿದಂತೆ ಹಿರಿಯ ಪತ್ರಕರ್ತರು ಹಾಜರಿದ್ದು ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net