ಶವ ಸಂಸ್ಕಾರ ಮುಗಿಸಿಕೊಂಡು ಬರುತ್ತಿದ್ದ 40 ಜನರಿಗೆ ಎದುರಾಯ್ತು ಸಂಕಷ್ಟ!

ACCIDENT
Published on

ಹನೂರು: ಸಂಬಂಧಿಕರೊಬ್ಬರ ಶವ ಸಂಸ್ಕಾರ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದಾಗ ಮಾರ್ಗ ಮಧ್ಯೆ ಭಾರೀ ದುರಂತ ಸಂಭವಿಸಿದ್ದು, 40ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರಿನಿಂದ ಶಾಗ್ಯ ಗ್ರಾಮಕ್ಕೆ ಶವ ಸಂಸ್ಕಾರಕ್ಕೆ ತೆರಳಿದ್ದ ಜನರು ಶನಿವಾರ ಮಧ್ಯಾಹ್ನ ಈಚರ್ ವಾಹನದಲ್ಲಿ ವಾಪಸ್​ ಆಗುತ್ತಿದ್ದರು. ಈ ವೇಳೆ ಶಾಗ್ಯ ಬಳಿಯೇ ವಾಹನ ಪಲ್ಟಿಯಾಗಿದ್ದು, ಬಹುತೇಕ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡವರನ್ನು ಹನೂರು ಆಸ್ಪತ್ರೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net