

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಮೇಲಿಂದ ಮೇಲೆ ಅಪಘಾತಗಳಾಗುತ್ತಿದ್ದು, ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಸಾವಿಗೀಡಾಗಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ.
ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಯುವತಿ ಸೇರಿದಂತೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಲಾರಿಯನ್ನು ಓವರ್ಟೇಕ್ ಮಾಡಲು ಯತ್ನಿಸುತ್ತಿದ್ದಾಗ ಅದರ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.