

ವಿಜಯಪುರ: ಇಂದು ಎರಡು ಭೀಕರ ಅಪಘಾತ ನಡೆದ ಬೆನ್ನಿಗೇ ಇನ್ನೊಂದು ಅಪಘಾತದ ಸುದ್ದಿ ಕೇಳಿಬಂದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ನಾಲತವಾಡ ನಿವಾಸಿಗಳಾದ ಸಂಗಪ್ಪ ಪೂಜಾರಿ (30) ಹಾಗೂ ಚಂದ್ರಶೇಖರ ತಾಳಿಕೋಟಿ (23) ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಕಿಶೋರ ತಡಸದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಲಾರಿ, ಆಟೋಗಳ ನಡುವೆ ಭೀಕರ ಅಪಘಾತ; 6 ಮಂದಿ ಮೃತ್ಯು
ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಒಂದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.