ಬಸ್-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ!

Untitled design - 2024-02-18T183820.001
Published on

ರಾಯಚೂರು: ರಾಯಚೂರು ತಾಲ್ಲೂಕಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್​ ಮತ್ತು ಇನ್ನೋವಾ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮಾರಿಯಾ ಗೀತಾ(38) ಹಾಗೂ ಅಮಲ್ ಪಾಲ್ ಮೇರಿ(64) ಮೃತಪಟ್ಟ ದುರ್ದೈವಿಗಳು. ಹೈದ್ರಾಬಾದ್​ನಿಂದ ಸಿಂಧನೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್, ಗದಗದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಗಾಯಗೊಂಡು ಐವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆಯನ್ನು ಕೊಡಿಸಲಾಗಿದೆ. ಈ ಪ್ರಕರಣ ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net