ಬೈಕ್​ಗೆ ಟಿಪ್ಪರ್ ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಾಯ

BIke 29
Published on

ದಾವಣಗೆರೆ: ಟಿಪ್ಪರ್​ ಮತ್ತು ಬೈಕ್​ ನಡುವೆ ಅಪಘಾತವಾಗಿ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಹನಗವಾಡಿ ಕ್ರಾಸ್‌ ಬಳಿ ನಡೆದಿದೆ.

ಹನಗವಾಡಿ ನಿವಾಸಿ ಕೋಮಲಾ (19) ಮೃತ ಯುವತಿ. ಈಕೆ ಬೈಕ್​​ನಲ್ಲಿ ಹನಗವಾಡಿಗೆ ತೆರಳುತ್ತಿದ್ದಳು. ಎದುರಿನಿಂದ ಬಂದ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಬೈಕ್​ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಟಿಪ್ಪರ್​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರಿಹರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net