ಎರಡು ಲಾರಿಗಳ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

Accident 16 Feb 20
Published on

ವಿಜಯಪುರ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ದುರ್ಘಟನೆ ಕೋಲ್ಹಾರ ಪಟ್ಟಣದ ಗರಸಂಗಿ ಕ್ರಾಸ್​ ಬಳಿ ನಡೆದಿದೆ.

ಒಂದು ಲಾರಿ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಹೋಗುತ್ತಿತ್ತು. ಮತ್ತೊಂದು ಲಾರಿ ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ರಾಜ್ಯ ಹೆದ್ದಾರಿ 218ರಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.

ಮೃತರ ಊರು ಮತ್ತು ಹೆಸರುಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ಕೋಲ್ಹಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net