ಬಸ್​-ಆಟೋ ನಡುವೆ ಭೀಕರ ಅಪಘಾತ: 13 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

accident
Published on

ಮಧ್ಯಪ್ರದೇಶ: ಗ್ವಾಲಿಯರ್‌ನ ಪುರಾಣಿ ಚವಾನಿ ಪ್ರದೇಶದಲ್ಲಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಮೃತರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕ. ಆಟೋ ಚಾಲಕನೂ ಬದುಕಿಲ್ಲ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತ ದುರಂತಕ್ಕೆ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಓವರ್‌ಲೋಡ್ ಮಾಡಿಕೊಂಡು ಜನರನ್ನು ಕರೆದೊಯ್ಯುತ್ತಿದ್ದ ಆಟೋ ಮತ್ತು ಮೊರೆನಾದಿಂದ ವೇಗವಾಗಿ ಬರುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಮಹಿಳೆಯರು, ಆಟೋ ಚಾಲಕ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಮಹಿಳೆಯರು ಅಡುಗೆ ಕೆಲ ಮಾಡುತ್ತಿದ್ದರು. ಕೆಲಸಕ್ಕೆಂದು ಆಟೋದಲ್ಲಿ ಹೋಗುವಾಗ ಅಪಘಾತಕ್ಕೀಡಾಗಿ ದರಂತ ಅಂತ್ಯ ಕಂಡಿದ್ದಾರೆ ಎಂದು ಗ್ವಾಲಿಯರ್​ ಎಸ್​ಪಿ ಅಮಿತ್ ಸಂಘಿ ಮತ್ತು ನಗರ ಪೊಲೀಸ್ ಅಧೀಕ್ಷಕ (ಸಿಎಸ್ಪಿ) ರವಿ ಭಡೋರಿಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net