

ಮೂಡಿಗೆರೆ: ತಾಲೂಕಿನ ಬಣಕಲ್ ಹೋಬಳಿಯ ಕೋಗಿಲೆ ಮತ್ತು ಸಂಪಿಗೆಖಾನ್ ಗ್ರಾಮದಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ 13ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೋಗಿಲೆ ಗ್ರಾಮದಲ್ಲಿ ಮಗುಚಿಬಿದ್ದ ಪರಿಣಾಮ ಜೀಪಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ತಾಲೂಕಿನ ಸಂಪಿಗೆ ಖಾನ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಟಿಟಿ ವಾಹನ ಪಲ್ಟಿಯಾಗಿದೆ. ಅತಿಯಾದ ಮಳೆಯಿಂದಾಗಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದೆ.
ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಟಿಟಿ ವಾಹನದಲ್ಲಿದ್ದ ಪ್ರಯಾಣಿಕರು ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ 15 ಪ್ರಯಾಣಿಕರ ಪೈಕಿ 9 ಮಂದಿಗೆ ಗಾಯವಾಗಿದೆ. ಅವರನ್ನು ಕಳಸ ಮತ್ತು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.