ಕಾಗವಾಡ ಬಳಿ ಅಪಘಾತ: ಮೃತ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ

Minister Shivanand Patil
Published on

ಬೆಂಗಳೂರು: ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಗಾಯಳು ಬೇಗ ಚೇತರಿಸಿಕೊಳ್ಳಲಿ ಎಂದು ಶಿವಾನಂದ ಪಾಟೀಲ ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net