ಚಿಂತಾಮಣಿ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಮತ್ತು ಆಂಬುಲೆನ್ಸ್ ಸೇವೆ ಸಿಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಬೈರಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಪಾಪಿರೆಡ್ಡಿ (65 ) ಮೃತ. ವರಮಹಾಲ್ಮ ಹಬ್ಬದ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿರುವ ಮಗಳಿಗೆ ಹೂವು ತೆಗೆದುಕೊಂಡುಬೈಕ್ನಲ್ಲಿ ಚಿಂತಾಮಣಿ&ಮದನಪಲ್ಲಿ ರಸ್ತೆಯಲ್ಲಿ ಬರುತ್ತಿದ್ದಾಗ ಮರಿನಾಯನಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ರಸ್ತೆಯಲ್ಲಿ ಬಿದ್ದ ಬೈಕ್ ಸವಾರ ಪಾಪಿರೆಡ್ಡಿ ಅವರನ್ನು ಇತರ ವಾಹನ ಸವಾರರು ನೋಡಿ ಆಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಆಂಬುಲೆನ್ಸ್ ಸಕಾಲಕ್ಕೆ ಬಾರದ ಹಿನ್ನೆಲೆಯಲ್ಲಿ ಖಾಸಗಿ ಕಾರಿನಲ್ಲಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರಾದರೂ ಚಿಕಿತ್ಸೆ ಲಕಾರಿಯಾಗಲಿಲ್ಲ. ಬೈಕ್ ಸವಾರನ ಸಾವಿಗೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ರ್ನಿಲಕ್ಷ$್ಯವೇ ಕಾರಣವೆಂದು ಮೃತರ ಪುತ್ರಿ ಭಾಗ್ಯಲ್ಮ ಮತ್ತು ವಕೀಲ ಮಂಜುನಾಥರೆಡ್ಡಿ ಆರೋಪಿಸಿದ್ದಾರೆ. ಗಾಯಾಳು ತಲೆಗೆ ಗಾಯ ಆಗಿದ್ದರೆ, ಕಾಲಿಗೆ ಬ್ಯಾಂಡೇಜ್ ಹಾಕಿದ್ದಾರೆ.ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್ ಕಲ್ಪಿಸಲು ವೈದ್ಯರು ವಿಫಲರಾಗಿದ್ದಾರೆ. ಅಪಘಾತದ ಬಗ್ಗೆ ಪೊಲೀಸರಿಗೆ ಸಹ ಸರಿಯಾದ ಮಾಹಿತಿ ನೀಡಿಲ್ಲ ಎಂದು ದೂರಿದರು. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.