

Accused Abscond:8 ವರ್ಷದ ಬಾಲಕಿ ಮೇಲೆ ಅಪರಿಚಿತರಿಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಫಸಲ್ವಾಡಿ ಗ್ರಾಮದಲ್ಲಿ ನಡೆದಿದೆ.
ಗುರುವಾರ ಸಂಜೆ ಗ್ರಾಮದ ಡಬಲ್ ಬೆಡ್‌ರೂಮ್ ವಸತಿ ಸಮುಚ್ಚಯದ ಬಳಿ ಈ ಕೃತ್ಯ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಇಬ್ಬರು ಶಂಕಿತರು, ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮನೆಯ ಹೊರಗೆ ಆಟವಾಡುತ್ತಿದ್ದ ಸ್ಥಳದಿಂದ ಕರೆದುಕೊಂಡು ಹೋಗಿ, ಹತ್ತಿರದ ನಿರ್ಜನ ಪ್ರದೇಶದ ಪೊದೆಯಲ್ಲಿ ಈ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಾಲಕಿ ರಕ್ತಸ್ರಾವವಾಗಲು ಪ್ರಾರಂಭಿಸಿ ಸಹಾಯಕ್ಕಾಗಿ ಕಿರುಚಿದಾಗ, ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಒಬ್ಬ ಶಂಕಿತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಲ್ಲೆಯ ಸಮಯದಲ್ಲಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್)