ಹುಂಡಿ ಕಳ್ಳತನ ಯತ್ನ ಆರೋಪಿ ಬಂಧನ

Published on

ಸಿದ್ದಾಪುರ: ವಿರಾಜಪೇಟೆ ತಾಲೂಕು ಮಾಲ್ದಾರೆ ಗಣಪತಿ ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನಿಸಿದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಲಕ್ಕೆ ಹಾಜರುಪಡಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ಹಾಲುಗುಂದ ನಿವಾಸಿ ವೀರೇಶ ಬಂಧಿತ. ಈತ ಜ.2ರಂದು ಹುಂಡಿ ಕಳ್ಳತನಕ್ಕೆ ಯತ್ನ ನಡೆಸಿದ್ದು, ಎರಡು ತಿಂಗಳ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net