ಮನೆ ಮುಂದೆ ಗಾಂಜಾ ಗಿಡ ಬೆಳೆಸಿದ್ದ ಆರೋಪಿ ಜೈಲಿಗೆ

ganja
Published on

ಬೆಂಗಳೂರು: ಮನೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರಿನ ಭೈರತಿ ನಿವಾಸಿ ರಾಮ್ ಆಶೀಶ್ (33) ಬಂಧಿತ. ಬೈರತಿಯಲ್ಲಿರುವ ಕಟ್ಟಡವೊಂದರ 3ನೇ ಮಹಡಿಯಲ್ಲಿ ನೆಲೆಸಿದ್ದ ಆರೋಪಿ, ಮನೆ ಪ್ರವೇಶ ದ್ವಾರದಲ್ಲಿ ಗಾಂಜಾ ಗಿಡ ಬೆಳೆಸಿದ್ದ. ಖಚಿತ ಮಾಹಿತಿ ಪಡೆದ ಪೊಲೀಸರು, ಮನೆ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net