ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸೆರೆ

arrested
Published on

ಬೆಂಗಳೂರು: 6 ವರ್ಷದ ಬಾಲಕಿ ಮೇಲೆ ಆರೋಪಿಯೊಬ್ಬ ಲೈಂಗಿಕ ದೌರ್ಜನ್ಯ ಎಗಿರುವ ಘಟನೆ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಈ ಕೃತ್ಯ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಕಲ್ಕತ್ತಾ ಮೂಲದ ಮಂಜುಮ್(೩೦) ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಏ.೧೮ ರಂದು ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ಆರೋಪಿಯು ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿಯ ಪಾಲಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net