ಉದ್ಯಮಿಗೆ ಜೀವ ಬೆದರಿಕೆ ಆರೋಪ: ಬನ್ನಂಜೆ ರಾಜನ ಸಹಚರ ಶಶಿಗೆ ಜಾಮೀನು

highcourt
Published on

ಬೆಂಗಳೂರು: ಉದ್ಯಮಿ ರತ್ನಾಕರ ಡಿ. ಶೆಟ್ಟಿಗೆ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿ ಪೂಜಾರಿ ಅಲಿಯಾಸ್ ಶ್ಯಾಡೋಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜೆ.ಪಿ ನಗರದ ನಿವಾಸಿ ಶಶಿ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

2019ರ ಮಾ.3ರಂದು ಉಡುಪಿಯ ಉದ್ಯಮಿ ರತ್ನಾಕರ ಶೆಟ್ಟಿ ನೀಡಿದ ದೂರಿನ ಮೇರೆಗೆ ಬನ್ನಂಜೆ ರಾಜ, ಶಶಿ ಪೂಜಾರಿ ಅಲಿಯಾಸ್ ಶ್ಯ ಶ್ಯಾಡೋ ಅಲಿಯಾಸ್ ಶಶಿಕುಮಾರ್, ಧನರಾಜ್ ವಿ. ಕೋಟ್ಯನ್ ಅಲಿಯಾಸ್ ಧನರಾಜ್ ಪೂಜಾರಿ ಅಲಿಯಾಸ್ ಧನರಾಜ್ ಅಲಿಯಾಸ್ ರಾಕ್, ರವಿಚಂದ್ರ ಪೂಜಾರಿ ಅಲಿಯಾಸ್ ವಿಕ್ಕಿ ಪೂಜಾರಿ, ಧನರಾಜ್ ಸಾಲಿಯಾನ್ ಅಲಿಯಾಸ್ ಧನು ಕೋಳ, ಉಲ್ಲಾಸ್ ಶೆಣೈ ಅಲಿಯಾಸ್ ಉಲ್ಲಾಸ್ ವಿರುದ್ಧ 2019ರಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net