ಆರೋಪಿಗಳ ಮೊಬೈಲ್‌ಗಳು ಎಫ್‌ಎಸ್‌ಎಲ್ ಗೆ ರವಾನೆ

Ramya Darshan
Published on

ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ೧೨ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ರಿಟ್ರೀವ್ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನೆ ಮಾಡಿದ್ದಾರೆ.

ಆರೋಪಿಗಳ ಖಾತೆಗಳು, ಕಮೆಂಟ್‌ಗಳು ರಿಟ್ರೀವ್ ಆಗಬೇಕಿದ್ದು, ವರದಿ ಬಂದ ಬಳಿಕ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆಯಾಗುವಂತೆ ಪೋಸ್ಟ್ ಮಾಡಿದ ಆರೋಪ ಹಿನ್ನೆಲೆ ಪ್ರಕರಣ ಸಂಬಂಧ ಈವರೆಗೂ ೧೨ ಆರೋಪಿಗಳನ್ನು ಸಿಸಿಬಿ ಬಂಧಿಸಿದೆ.

ಜಾಮೀನಿಗಾಗಿ ಪರದಾಟ:

ಸಾಮಾಜಿಕ ಜಾಲತಾಣದಲ್ಲಿ ರಮ್ಯ ಅವರಿಗೆ ಅವಹೇಳಕನಾಕಾರಿಯಾಗಿ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಇದುವರೆಗೂ ಒಟ್ಟು ೧೨ ಮಂದಿಯನ್ನು ಬಂಧಿಸಲಾಗಿದ್ದು, ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಜೈಲಿನಲ್ಲಿದ್ದು ಜಾಮೀನಿಗಾಗಿ ಆರೋಪಿಗಳು ಪರದಾಟ ನಡೆಸುತ್ತಿದ್ದಾರೆ. ತಮ್ಮ ಮಕ್ಕಳನ್ನು ಜೈಲಿನಿಂದ ಹೊರ ತರಲು ಪಾಲಕರು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.

ಏನಿದು ಪ್ರಕರಣ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ರಮ್ಯ ಅವರು ರೇಣುಕಸ್ವಾಮಿ ಕುಟುಂಬದ ಪರವಾಗಿ ನಿಂತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ್ದರು. ಈ ಬಗ್ಗೆ ರಮ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆಗೆ ಇಳಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ೧೨ ಮಂದಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net