

ಶಿವಮೊಗ್ಗ: ಕಲಿಕೆಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶಗಳಿವೆ. ಹೊಸತನವನ್ನು ಕಲಿಯುವ ತುಡಿತ ಇದ್ದಾಗ ಮಾತ್ರ ಸಾಧನೆ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ಎನ್‌ಇಎಸ್‌ಯಿಂದ ಎಸ್‌ಆರ್‌ಎನ್‌ಎಂ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿಗೆ ಏರ್ಪಡಿಸಿದ್ದ ಆಡಳಿತ ನಿರ್ವಹಣೆ- ಕೌಶಲ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಏಕರೂಪವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆ ಉನ್ನತಿಯಾಗುತ್ತದೆ. ಲೆಕ್ಕಾಚಾರವಿಲ್ಲದ ಬದುಕು ನಿರರ್ಥಕ. ಅಕಾರ ಎಂಬುದು ದರ್ಪದಿಂದ ಕೂಡಿರದೆ, ಸೌಜನ್ಯದಿಂದ ಇರಬೇಕು. ವಿಶ್ವಾಸಪೂರ್ವಕ ನಡೆಯಿಂದ ಹೊಸತನ ಕಲಿಯಲು ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿ ವೆಂಕಟೇಶ ರಾವ್ ಮಾತನಾಡಿ, ವಿದ್ಯಾರ್ಥಿಗಳ ಭದ್ರತೆ ವಿಷಯದಲ್ಲಿ ವಿದ್ಯಾಸಂಸ್ಥೆಯ ಎಲ್ಲ ಸಿಬ್ಬಂದಿ ಜವಾಬ್ದಾರರು. ಈ ವಿಷಯದಲ್ಲಿ ಅನುದಾನಿತ ಮತ್ತು ಅನುದಾನರಹಿತ ಎಂಬ ವ್ಯತ್ಯಾಸವಿಲ್ಲ. ಶಿಕ್ಷಣ ಕಾಯ್ದೆಯನ್ನು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಧ್ಯಯನ ನಡೆಸಬೇಕು. ಮಾಹಿತಿ ಹಕ್ಕು ಅನಿಯಮ ಪ್ರಬಲ ಅಸ. ಆಡಳಿತದ ಪ್ರತಿ ಹಂತದಲ್ಲೂ ಸಾರ್ವಜನಿಕರು ಭಾಗವಹಿಸಲು ಮಾಹಿತಿ ಹಕ್ಕು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.
ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕರಾದ ಪಿ.ಮೈಲಾರಪ್ಪ, ಎಂ.ಎಸ್.ಅನಂತದತ್ತ, ಜಿ.ಎನ್.ಸುೀರ್, ಶಿವಕುಮಾರ್, ಸೀತಾಲಕ್ಷ್ಮೀ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಪಿಆರ್‌ಒ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.