ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಸಾಧನೆ

Untitled
Published on

ಧಾರವಾಡ : ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಬಳಿ ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಸೂರ್ತಿ ಈಶ್ವರಯ್ಯ ತೊರಗಲ್ಲಮಠ ಶೇ. ೯೪ ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ರತ್ನಾ ಶ್ರೀಕಾಂತ ಕಲ್ಯಾಣಿ ಶೇ. ೯೨.೬ ದ್ವಿತೀಯ ಹಾಗೂ ಆದಿತ್ಯಾ ಸೋಮನಾಥ ಚವ್ಹಾಣ ಶೇ. ೯೦.೬ ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net