ಶಾಸ್ತ್ರೀ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ

HUN-JAN-28-3(SHASTRI SCHOOL WINNERS)
Published on

ಹುಣಸೂರು: ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಪಟ್ಟಣದ ಶಾಸ್ತ್ರೀ ವಿದ್ಯಾಸಂಸ್ಥೆ 7 ವಿಭಾಗಗಳಲ್ಲಿ ಬಹುಮಾನ ಪಡೆದಿದೆ ಎಂದು ಸಂಸ್ಥೆ ಕಾರ್ಯದರ್ಶಿ ರಾಧಾಕೃಷ್ಣ ತಿಳಿಸಿದ್ದಾರೆ.

ಪಥಸಂಚಲನದ ಫ್ರೌಡಶಾಲಾ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಪ್ರಥಮ, ಸಾಮೂಹಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಬಾಲಕರ ವಾಲಿಬಾಲ್ ಪಂದ್ಯದಲ್ಲಿ ದ್ವಿತೀಯ, ಫ್ರೌಡಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ಟ್ರಮ್‌ಕಾರ್ಡ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net