ಹಿರಿಯರ ಸಾಧನೆ ಕಲಿಕಾ ವಿದ್ಯಾರ್ಥಿಗಳಿಗೆ ಪ್ರೇರಣೆ

3hgr1.
ಹಲಗೂರು ಸಮೀಪದ ಬ್ಯಾಡರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ‘ವಿದ್ಯಾರ್ಥಿಗಳ ಸಂಘದ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಲಾಯಿತು.
Published on

ಹಲಗೂರು: ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳ ಸಾಧನೆ ಪ್ರಸ್ತುತ ಸಾಲಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಹಲಗೂರು ವಲಯ ಅರಣ್ಯ ಅಧಿಕಾರಿ ಅನಿಲ್ ಕುಮಾರ್ ಅಭಿಪ್ರಾಯಪಟ್ಟರು.

ಹಲಗೂರು ಸಮೀಪದ ಬ್ಯಾಡರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ‘ವಿದ್ಯಾರ್ಥಿಗಳ ಸಂಘದ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಸತಿ ಶಾಲೆ ತಾಲೂಕು ಸಮನ್ವಯ ಅಧಿಕಾರಿ ಮುರಳೀಧರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬ ಮತ್ತು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸುವ ಜೊತೆಗೆ ಸಮಾನತೆ ಸಾಧಿಸುವುದು ವಸತಿ ಶಾಲೆಗಳ ಪ್ರಮುಖ ಆಶಯವಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಊಟ, ವಸತಿ, ಸಮವಸ್ತ್ರ, ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ಅಗತ್ಯವಿರುವ ಕರಾಟೆ, ಸ್ಪೋಕನ್ ಇಂಗಿಷ್, ಜೀವನ ಕೌಶಲ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಹಿರಿಯ ಪ್ರಾಂಶುಪಾಲ ಸಿದ್ದರಾಜು, ಅರಣ್ಯ ಇಲಾಖೆ ಅಧಿಕಾರಿ ಸಿದ್ದರಾಮ ಪೂಜಾರಿ, ಪ್ರಾಂಶುಪಾಲರಾದ ಸತೀಶ್, ಅನಿಲ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net