ನವೋದಯ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

02BTP02
ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಡಿ.ತಮ್ಮಯ್ಯ ಸ್ಮಾರಕ ನವೋದಯ ಪದವಿ ಪೂರ್ವ ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಚಂದ್ರಶೇಖರ್, ಜೆ.ಸಿ ನಟರಾಜ್, ಸತೀಶ್, ಮುರಳಿ, ಶ್ವೇತಾ ಇದ್ದರು.
Published on

ಬೆಟ್ಟದಪುರ: ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಇಲ್ಲಿನ ಡಿ.ತಮ್ಮಯ್ಯ ಸ್ಮಾರಕ ನವೋದಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬುಧವಾರ ಸಂಸ್ಥೆಯಿಂದ ಅಭಿನಂದಿಸಲಾಯಿತು.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ವಿದ್ಯಾರ್ಥಿಗಳಾದ ಕೆ.ಎಂ.ಸಿಂಚನಾ 5000 ಮೀಟರ್ ವೇಗದ ನಡಿಗೆಯಲ್ಲಿ ಪ್ರಥಮ ಸ್ಥಾನ, ಎಂ.ಜೆ.ಸಾನಿಕಾ 400 ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಿಂಚನಾ 400 ಮತ್ತು 100 ಮೀಟರ್ ಹರ್ಡಲ್ಸ್ನಲ್ಲಿ ತೃತೀಯ ಸ್ಥಾನ ಪಡೆದಿದ್ದು, ಮೂವರೂ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.

ಸಂಸ್ಥೆ ಅಧ್ಯಕ್ಷ ಚಂದ್ರಶೇಖರ್, ಆಡಳಿತಾಧಿಕಾರಿ ಜೆ.ಸಿ ನಟರಾಜ್, ಪ್ರಾಂಶುಪಾಲ ಸತೀಶ್, ಮುಖ್ಯ ಶಿಕ್ಷಕರಾದ ಮುರಳಿ, ಶ್ವೇತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net