

ಮೈಸೂರು: ಡೆಂೆ ಜ್ವರ ನಿಯಂತ್ರಣಕ್ಕೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಆಯೋಜಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಡೆಂೆ ನಿಯಂತ್ರಣಕ್ಕೆ ಅಧಿಕಾರಿಗಳ ಜತೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದರು.
ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಿಂದ ಡೆಂೆಗೆ ಮುಕ್ತಿ ನೀಡಬಹುದು. ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಾಗಿದೆ. ಯಾರೂ ಡೆಂೆ ಪ್ರಕರಣಗಳ ಬಗ್ಗೆ ನಿರ್ಲಕ್ಷೃ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ರಸ್ತೆ ಬದಿಯಲ್ಲಿ ಕಸ ಹಾಕದಂತೆ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಬೇಕು. ಕಸವನ್ನು ಪ್ರತಿ ಮನೆಗಳಿಂದ ಸಂಗ್ರಹಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.