ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: CM ಸಿದ್ದರಾಮಯ್ಯ ಎಚ್ಚರಿಕೆ

Untitled design - 2025-10-08T143528.740
Published on

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು CMಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net