ವರ್ಗಾವಣೆಗೆ ರಾಜಕೀಯ ಪ್ರಭಾವ ಬಳಸಿದವರ ವಿರುದ್ಧ ಕ್ರಮ: ಸಿಎಂ ಸೂಚನೆ

Siddaramaiah
Published on

ಬೆಂಗಳೂರು; ಸೇವಾ ವಿಷಯಗಳು ಹಾಗೂವರ್ಗಾವಣೆಗೆ ರಾಜಕೀಯ ಪ್ರಭಾವಬೀರುವ ನೌಕರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ರವಾನಿಸಿರುವ ಸಿಎಂ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಾಗ ಪಾಲಿಸಬೇಕಾದ ನಿಯಮಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಇದೆ. ಸಂಬಂಧಿಸಿದ ಇಲಾಖೆಯ ಕಾರ್ಯದರ್ಶಿ ಬದಲು ನೇರವಾಗಿ ಇಲಾಖೆ ಸಚಿವರಿಗೆ ಸಲ್ಲಿಸಬಾರದು ಎಂದು ತಿಳಿಸಲಾಗಿತ್ತು.

ಆದಾಗ್ಯೂ ಸೂಚನೆಗಳನ್ನು ಕಡೆಗಣಿಸಿ ವರ್ಗಾವಣೆ ಮತ್ತಿತರ ಸೇವಾ ವಿಷಯಗಳಿಗೆ ನೇರವಾಗಿ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿ ರಾಜಕೀಯ ಪ್ರಭಾವ ಬೀರುತ್ತಿರುವುದು ಕಂಡುಬಂದಿದೆ.

ಈಗಾಗಲೇ ಸರ್ಕಾರ ಹೊರಡಿಸಿದ ಆದೇಶಗಳನ್ನು ನೌಕರರು ಕಟ್ಟುನಿಟ್ಟಾಗಿ ಪಾಲಿಸಲು ಮತ್ತೊಮ್ಮೆ ಸೂಚನೆ ನೀಡಬೇಕು. ಉಲ್ಲಂಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅಗತ್ಯ ಕ್ರಮ ವಹಿಸುವಂತೆ ಮುಖ್ಯಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net