ಖಾದಿ ಕೇಂದ್ರ ಅಭಿವೃದ್ಧಿಗೆ ಕ್ರಮ

ಖಾದಿ ಕೇಂದ್ರ ಅಭಿವೃದ್ಧಿಗೆ ಕ್ರಮ
Published on

ನಂಜನಗೂಡು: ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ 90 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಭಾರತ್ ಜೋಡೋ ಯಾತ್ರೆ ಸಂದರ್ಭ ಬದನವಾಳು ಗ್ರಾಮದಲ್ಲಿ ಗಾಂಧೀಜಿ ಸ್ಥಾಪಿಸಿರುವ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾದಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ 90 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸುಮಾರು 650 ಮೀ. ಸುಸಜ್ಜಿತ ರಸ್ತೆ ನಿರ್ಮಾಣಮಾಡಲಾಗುತ್ತದೆ. ಅಲ್ಲದೆ ವರುಣ ವಿಧಾನಸಭಾ ಕ್ಷೇತ್ರದ ಮಲ್ಲೂಪುರ ಗ್ರಾಮದಿಂದ ನಂಜನಗೂಡು ಕ್ಷೇತ್ರದ ಬದನವಾಳು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗಲಿದೆ. ಇದು ಸುತ್ತಮುತ್ತಲ ಗ್ರಾಮದ ಜನರಿಗೆ ಅನುಕೂಲವಾಗಲಿದೆ ಎಂದರು.

ಸ್ವತಃ ಮಹಾತ್ಮಗಾಂಧಿಯವರೇ ಬದನವಾಳು ಗ್ರಾಮದಲ್ಲಿ ಸ್ಥಾಪಿಸಿರುವ ಖಾದಿ ಕೇಂದ್ರ ಅಭಿವೃದ್ಧಿ ಪಡಿಸಲು ಸಿದ್ಧತೆ ಕೈಗೊಂಡಿದ್ದರು. ಅದರಂತೆ ಖಾದಿ ಕೇಂದ್ರವನ್ನು ಮಾದರಿಯಾಗಿ ಅಭಿವೃದ್ದಿಪಡಿಸಿ ಪ್ರವಾಸಿತಾಣವನ್ನಾಗಿ ಮಾಡಲು ಕ್ರಮವಹಿಸುತ್ತೇನೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷ ದೊರೆಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿಮಹೇಶ್, ಮುಖಂಡ ವಿಜಯ್‌ಕುಮಾರ್, ರಂಗದಾಸ್, ಶಿವಸ್ವಾಮಿ, ಮಂಜುನಾಥ್, ಅಶೋಕ್, ನಾಗರಾಜು, ಬದನವಾಳು ಸೋಮು, ರಮೇಶ್, ಪಿಡಿಒ ಕರಿಯಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net