ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಕ್ರಮ

Bhoomi pooje
ಸಾಗರದ ಭೀಮನಕೋಣೆ ರಸ್ತೆಯಲ್ಲಿ ಗಾಂಧಿನಗರ ವೃತ್ತದಿಂದ ರಾಮನಗರ ವೃತ್ತದವರೆಗೆ 6 ಕೋಟಿ ರೂ. ವೆಚ್ಚದ ದ್ವಿಪಥ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಅನಿಲ್, ಗಣಪತಿ, ವಿ.ಮಹೇಶ್, ಅರವಿಂದ ರಾಯ್ಕರ್, ಮಧುಮಾಲತಿ, ರವಿಕುಮಾರ್, ಸತೀಶ್ ಇತರರಿದ್ದರು.
Published on

ಸಾಗರ: ನಗರದ ನಾಲ್ಕೂ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಮೂಲಕ ಸಂಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಾಗರದ ಭೀಮನಕೋಣೆ ರಸ್ತೆಯಲ್ಲಿ ಗುರುವಾರ ಗಾಂಧಿನಗರ ವೃತ್ತದಿಂದ ರಾಮನಗರ ವೃತ್ತದವರೆಗೆ 6ಕೋಟಿ ರೂ. ವೆಚ್ಚದ ದ್ವಿಪಥ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ದಿನೇದಿನೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾದ ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭೀಮನಕೋಣೆ ರಸ್ತೆ ಅಭಿವೃದ್ಧಿಗೆ 6 ಕೋಟಿ ರೂಪಾಯಿ, ಕೆಳದಿ ರಾಣಿ ಚನ್ನಮ್ಮ ವೃತ್ತದಿಂದ ಶ್ರೀಗಂಧ ಸಂಕೀರ್ಣವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ 5.5 ಕೋಟಿ ರೂ. ಬಿಡುಗಡೆಯಾಗಿದೆ. ಕೆಳದಿ ರಸ್ತೆ ಅಗಲೀಕರಣಕ್ಕೆ ಶೀಘ್ರ ಚಾಲನೆ ನೀಡಲಾಗುತ್ತದೆ. ಜತೆಗೆ ಬಿ.ಎಚ್.ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಮುನ್ನಡೆಸುತ್ತಿದ್ದೇವೆ ಎಂದರು.

ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಶಾಸಕರ ಮಾರ್ಗದರ್ಶನದಲ್ಲಿ ತ್ವರಿತಗತಿಯಲ್ಲಿ ಸಾಗುತ್ತಿದೆ. ಭೂಸ್ವಾಧೀನ ಪಡಿಸಿಕೊಳ್ಳಲು ಈಗಾಗಲೆ ಬಿ.ಎಚ್.ರಸ್ತೆ ನಿವಾಸಿಗಳಿಗೆ 30 ದಿನ ಗಡುವು ನೀಡಿ ನೋಟಿಸ್ ಪಿಡಬ್ಲುೃಡಿ ಎಇಇ ಅನಿಲ್, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ವಿ.ಮಹೇಶ್, ಅರವಿಂದ ರಾಯ್ಕರ್, ಮಧುಮಾಲತಿ, ರವಿಕುಮಾರ್, ಸತೀಶ್, ಸೈಯದ್ ಜಾಕೀರ್, ಪ್ರಮುಖರಾದ ಕಲಸೆ ಚಂದ್ರಪ್ಪ, ಉಷಾ, ಪ್ರಭಾವತಿ, ತಾಹೀರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net