

ನಂಜನಗೂಡು: ನಗರದ ಕಸ್ತೂರಬಾ ವಸತಿ ಶಾಲೆಗೆ ಕಾಂಪೌಂಡ್ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು.
ಮಂಗಳವಾರ ವಸತಿ ಶಾಲೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಕಸ್ತೂರಬಾ ಶಾಲೆಯಲ್ಲಿ ನೆರೆಯ ಗುಂಡ್ಲುಪೇಟೆ ಸೇರಿದಂತೆ ರಾಜ್ಯದ ವಿವಿಧ ಭಾಗದ ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದು, ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಲು ನಿರ್ದೇಶನ ನೀಡಲಾಗಿದೆ.
ವಸತಿ ಶಾಲೆಗೆ ಕಂಪ್ಯೂಟರ್ ಹಾಗೂ ಕೊಳವೆಬಾವಿ ಸೌಕರ್ಯ ಕಲ್ಪಿಸಲು ಮನವಿ ಮಾಡಿದ್ದಾರೆ. ಕ್ರಮವಹಿಸುವುದಾಗಿ ಹೇಳಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಹಗಿನವಾಳು ಬಸವಣ್ಣ, ಕರಳಪುರ ನಾಗರಾಜು, ದೇಬೂರು ಸಿದ್ಧಲಿಂಗಪ್ಪ ಇತರರು ಇದ್ದರು.