ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಿಸಲು ಕ್ರಮ

9bdvt1
ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲನಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿಸಿದರು. ಬಲ್ಕಿಶ್ ಬಾನು, ಬಿ.ಟಿ.ನಾಗರಾಜ್, ಮಣಿ, ಚನ್ನಪ್ಪ ಇತರರಿದ್ದರು.
Published on

ಭದ್ರಾವತಿ: ಭದ್ರಾ ಕಾಲನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರು, ಸಿಬ್ಬಂದಿ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಹೊಸ ಕಟ್ಟಡಕ್ಕೆ ಅಗತ್ಯವಿರುವ ಮೂಲ ಸೌಕರ್ಯ, ವೈದ್ಯರು ಹಾಗೂ ಸಿಬ್ಬಂದಿ ನೇಮಕಗೊಳಿಸುವಂತೆ ಮನವಿ ಮಾಡಿದ್ದು, ಜನರಿಗೆ ಹೆಚ್ಚಿನ ಸೇವೆ ಆಸ್ಪತ್ರೆಯಿಂದ ಲಭಿಸಬೇಕು. ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ವೈದ್ಯರು, ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಮಾತನಾಡಿ, ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆಗೊಳ್ಳಲು ಶಾಸಕರ ಪರಿಶ್ರಮ ಹೆಚ್ಚಿದ್ದು, ಕ್ಷೇತ್ರದಲ್ಲಿ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳಿಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವೈದ್ಯರು, ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಸದ್ಬಳಕೆ ಮಾಡಿಕೊಂಡು ಉತ್ತಮ ಸೇವೆ ನೀಡಬೇಕು ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್, ನಗರಸಭೆ ಅಧ್ಯಕ್ಷ ಎಂ.ಮಣಿ, ಸದಸ್ಯ ಬಿ.ಟಿ.ನಾಗರಾಜ್, ಚನ್ನಪ್ಪ, ಬಗರ್‌ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್.ಮಣಿಶೇಖರ್, ಜಿಪಂ ಮಾಜಿ ಸದಸ್ಯ ಎಸ್.ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ.ಅಶೋಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪಿ.ಜಿ.ವಿಶ್ವನಾಥ್, ಎರೆಹಳ್ಳಿ ಗ್ರಾಪಂ ಸದಸ್ಯ ಶಿವರಾಂ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net