

ಕಡೂರು: ಶೈಕ್ಷಣಿಕ ಲಿತಾಂಶ ಹೆಚ್ಚಿಸುವ ಹಿನ್ನಲೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯೂಷನ್ ವ್ಯವಸ್ಥೆ ಮಾಡಲು ಪ್ರಾಚಾರ್ಯರೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಕುಡಿಯುವ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು. ಶೈಕ್ಷಣಿಕ ಲಿತಾಂಶ ಹೆಚ್ಚಿಸುವ ಹಿನ್ನಲೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯೂಷನ್ ವ್ಯವಸ್ಥೆ ಮಾಡಲು ಪ್ರಾಚಾರ್ಯರೊಂದಿಗೆ ಚರ್ಚಿಸಲಾಗುವುದು ಎಂದರು.
ಕಾಲೇಜಿನಲ್ಲಿ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಹೈಟೆಕ್ ಶೌಚಗೃಹ ನಿರ್ಮಿಸಲು ಪ್ರಯತ್ನಿಸಲಾಗುವುದು. ವಿಶೇಷ ಉಪನ್ಯಾಸಕರಿಗೆ ಸಿಇಟಿ ಕೋಚಿಂಗ್ ಕೊಡಿಸುವ ಮೂಲಕ ಶೈಕ್ಷಣಿಕ ಲಿತಾಂಶ ಹೆಚ್ಚಳಕ್ಕೆ ಒತ್ತು ನೀಡಲಾಗುವುದು ಎಂದರು.
ಸರ್ಕಾರ ಪದವಿ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಅನೇಕ ಸವಲತ್ತುಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ವ್ಯಾಸಂಗದ ಕಡೆ ಹೆಚ್ಚು ಗಮನಹರಿಸಿ ಕಾಲೇಜಿಗೆ ಉತ್ತಮ ಲಿತಾಂಶ ತರಬೇಕು. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಈ ಸಾಲಿನ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ನಗದು ಬಹುಮಾನವನ್ನು ವೈಯಕ್ತಿಕವಾಗಿ ನೀಡಲಾಗುವುದು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟನಾಯ್ಕ, ಕಡೂರು ಬಿಇಒ ಆರ್. ಸಿದ್ದರಾಜುನಾಯ್ಕ, ಪುರಸಭೆ ಸದಸ್ಯ ತೋಟದಮನೆ ಮೋಹನ್‌ಕುಮಾರ್, ಸಿಆರ್‌ಪಿ ಪ್ರೇಮ್‌ಕುಮಾರ್, ಸಪ್ತಕೋಟಿ ಧನಂಜಯ್, ಲೋಕೇಶ್, ರಾಜೀವ್ ಮತ್ತಿತರಿದ್ದರು.