

ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ. ತಿಮರೋಡಿ ವಿರುದ್ಧ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಈ ಹಿನ್ನೆಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಲಾಗಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಅವರನ್ನು ಗಡಿಪಾರು ಮಾಡಲಾಗಿದ್ದು, ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಸೇರಿದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ತಿಮರೋಡಿ ಅವರು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಇವರು ಸೌಜನ್ಯ ಪರ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇನ್ನೂ ಧರ್ಮಸ್ಥಳ ಪ್ರಕರಣ ಸಂಬಂಧ ಇವರ ಮನೆ ಮೇಲೆ ಎಸ್ಐಟಿ ಅಧಿಕಾರಿಗಳಿಂದ ದಾಳಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳು ಕಂಡುಬಂದ ಕಾರಣ, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
(ಏಜೆನ್ಸೀಸ್)