ಅಂಬಿ ಪುತ್ರನ ಕಲ್ಯಾಣ; ಅಭಿಷೇಕ್​-ಅವಿವಾಗೆ ಶುಭ ಕೋರಿದ ಸ್ಟಾರ್​​ ನಟ,ನಟಿಯರ ಫೋಟೋ ನೋಡಿ

abhishekambareesh
Published on

ಬೆಂಗಳೂರು: ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಏಕೈಕ ಪುತ್ರ ಅಭಿಷೇಕ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಸ್ಟಾರ್​​ ನಟ,ನಟಿಯರು ಭಾಗಿಯಾಗಿ ನವದಂಪತಿಗಳಿಗೆ ಶುಭಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್ ಆಗಿವೆ.

ಮದುವೆಯಲ್ಲಿ ಅಭಿಷೇಕ್ ಗೋಲ್ಡನ್ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡರೆ, ವಧು ಅವಿವಾ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಕೂಡ ಗೋಲ್ಡನ್ ಸೀರೆಯಲ್ಲಿ ಮಿಂಚಿದ್ದಾರೆ. ವಿಶೇಷ ಅಂದರೆ ತಮ್ಮ ಮದುವೆಗೆ, ಅವಿವಾ ಅವರೇ ಉಡುಗೆಯನ್ನ ಡಿಸೈನ್ ಮಾಡಿದ್ದಾರೆ ಎನ್ನಲಾಗಿದೆ.

ಅಭಿಷೇಕ್ ಮದುವೆ-ಅವಿವಾ ಕಲರ್​ಫುಲ್ ಫೋಟೋ ವೈರಲ್ ಆಗಿದೆ. ನಟ,ನಟಿಯರು ಹಾಗೂ ರಾಜಕೀಯ ಗಣ್ಯರು ಆಗಮಿಸಿ ನವ ದಂಪತಿಗೆ  ಶುಭಕೋರಿದ್ದಾರೆ.


ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಹಲವು ಗಣ್ಯರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದು ನವದಂಪತಿಗಳಿಗೆ ಆಶೀರ್ವದಿಸಿದರು.

ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.


ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ. ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು.


ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ. ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ 9:30-10:30 ಮೂರ್ಹತದಲ್ಲಿ ಅಭಿಷೇಕ್, ಅವಿವಾಗೆ ಮಾಂಗಲ್ಯ ಧಾರಣೆ ಮಾಡಿದ್ರು. ಇಬ್ಬರು ಒಟ್ಟಿಗೆ  ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net