ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ..Bank Janardhan Passes Away

bankjanardhan
Published on

ಬೆಂಗಳೂರು:  (Bank Janardhan Passes Away ) ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಜನಾರ್ಧನ್​​ ಅವರು ರಾತ್ರಿ 2.30ರ ಸುಮಾರಿಗೆ  ನಿಧನ ಹೊಂದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.

1949ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್​ಕೆರೆಯಲ್ಲಿ ಜನಿಸಿದರು. ನಂತರ ಕನ್ನಡ ಸಿನಿಮಾವೊಂದರ ಮೂಲಕವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್​..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net