ಹಿಂದುತ್ವದ ಬಗ್ಗೆ ಅವಹೇಳನ; ನಟ ಚೇತನ್ ಬಂಧನ

Chethan Arrest
Published on

ಬೆಂಗಳೂರು: ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ನಟ ಚೇತನ್​ನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಚೇತನ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇಂದು ಬೆಳಗ್ಗೆ ಬಂಧನ ಮಾಡಿದ್ದಾರೆ.

ಶಿವಕುಮಾರ್ ಎಂಬುವರು ನೀಡಿದ್ದ ದೂರಿನಂತೆ ಶೇಷಾದ್ರಿಪುರಂ ಠಾಣೆ ಪೊಲೀಸರು ಐಪಿಸಿ 295A, 505B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ನಟ ಚೇತನ್​ನನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಕರೆತಂದಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಅಧಿಕಾರಿಗಳ ಸೋಗಿನಲ್ಲಿ ದಂಪತಿ ಖಾತೆಯಿಂದ 3.7 ಲಕ್ಷ ರೂ. ಎಗರಿಸಿದ ಸೈಬರ್ ಕಳ್ಳರು!

ನಟ ಚೇತನ್ ತಮ್ಮ ಫೇಸ್​ಬುಕ್​ನಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಬರೆದುಕೊಂಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂಬುದು ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂದು ನಂಬಿರುವುದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದಾಗಿದೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಬಾವಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಬಯಲಾಯ್ತು ಬಾಲಕಿಯ ಚಿಮ್ಮಕ್ಕನ ಕಿರಾತಕ ಕೃತ್ಯ!

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net