

ಬೆಂಗಳೂರು: ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ನಟ ಚೇತನ್ ಅಹಿಂಸಾನನ್ನು ಶೇಷಾದ್ರಿಪುರಂ ಪೊಲೀಸರು ಇಂದು ಬೆಳಗ್ಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದೀಗ ನಟ ಚೇತನ್ಗೆ 32ನೇ ಎಸಿಎಮ್ಎಮ್ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಶಿವಕುಮಾರ್ ಎಂಬುವರು ನೀಡಿದ್ದ ದೂರಿನಂತೆ ಶೇಷಾದ್ರಿಪುರಂ ಠಾಣೆ ಪೊಲೀಸರು ಐಪಿಸಿ 295A, 505B ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಚೇತನ್ನನ್ನು ಬಂಧಿಸಿ ಕೋರ್ಟ್ಗೆ ಕರೆತಂದಿದ್ದರು. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಚೇತನ್ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ರೈಲು ನಿಲ್ದಾಣದ ಟಿ.ವಿ ಪರದೆಯಲ್ಲಿ ಪ್ರದರ್ಶನವಾದ ನೀಲಿ ಚಿತ್ರ; ಮುಜುಗರಕ್ಕೊಳಗಾದ ಪ್ರಯಾಣಿಕರು
ನಟ ಚೇತನ್ ತಮ್ಮ ಫೇಸ್ಬುಕ್ನಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಬರೆದುಕೊಂಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎಂಬುದು ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮಭೂಮಿ ಎಂದು ನಂಬಿರುವುದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದಾಗಿದೆ ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ: ನಾಗರಹಾವಿನ ವಿಷ ಹೀರಿ ತಾಯಿ ಜೀವ ಉಳಿಸಿದ ಪುತ್ರಿ