

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಇತ್ತೀಚೆಗಷ್ಟೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇದೀಗ ಅರ್ಜಿ ವಿಚಾರಣೆಯನ್ನು ಇದೇ ಸೆ.27ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಹಿಂದುಗಳ ತಾಳ್ಮೆಯ ಪರೀಕ್ಷೆ
ರೇಣುಕಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅನುಭವಿಸುತ್ತಿರುವ ಆರೋಪಿ ದರ್ಶನ್ ಮತ್ತು ಆತನ ಸಹಚರರು ಇದೀಗ ರಾಜ್ಯ ಇತರೆ ಜಿಲ್ಲೆಗಳ ಜೈಲಿನಲ್ಲಿ ತಮ್ಮ ಸೆರೆಮನೆ ವಾಸ ಮುಂದುವರೆಸಿದ್ದಾರೆ. ತನ್ನ ವಿರುದ್ಧ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ ಎರಡು ವಾರಗಳ ಬಳಿಕ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅರ್ಜಿ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಎ1 ಆರೋಪಿ ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರಿನ ಪರಪ್ಪನ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಇತ್ತೀಚೆಗಷ್ಟೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಇಂದೇ ನಡೆಸಿದ ಕೋರ್ಟ್, ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.