

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ (Actor Darshan) ಜಾಮೀನು ಅರ್ಜಿಯನ್ನು ಇದೀಗ ಹೈಕೋರ್ಟ್ ಮತ್ತೊಮ್ಮೆ ಮುಂದೂಡಿದೆ.
ಬೆನ್ನಿಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯಲು 6 ವಾರಗಳ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿರುವ ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ನ.28ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.