ಆಷಾಢ ಶುಕ್ರವಾರ ಹಿನ್ನೆಲೆ ಪತ್ನಿಯೊಂದಿಗೆ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್| Darshan

Untitled design
Published on

ಮೈಸೂರು; ಆಷಾಢ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು (04) ನಟ ದರ್ಶನ್ ತಮ್ಮ ಪತ್ನಿ ಮತ್ತು ಕುಟುಂಬಸ್ಥರ ಜೊತೆ ಬೆಳಗ್ಗೆಯೇ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಈ ವೇಳೆ ಸಹೋದರ ದಿನಕರ್ ಸಹ ಸಾಥ್​ ನೀಡಿದರು.

ನಟ ದರ್ಶನ್ ಕಾರು ಚಾಮುಂಡಿ ಬೆಟ್ಟಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಕಾರಿನ ಸುತ್ತ ಜಮಾಯಿಸಿದ್ದರು. ಕಾರಿನಿಂದ  ದರ್ಶನ್ ಇಳಿಯುತ್ತಿದ್ದಂತೆ, ಡಿಬಾಸ್, ಡಿಬಾಸ್​ ಎಂದು ಕೂಗುವ ಮೂಲಕ ಮೊಬೈಲ್ ಹಿಡಿದು ವಿಡಿಯೋ ಮಾಡಲು ಮುಗಿಬಿದ್ದರು. ಅಭಿಮಾನಿಗಳಿಗೆ ಕೈ ಮುಗಿದ ದರ್ಶನ್​ ದೇವಸ್ಥಾನದ ಒಳಗೆ ಹೋಗಿ ಪೂಜೆ ಮಾಡಿಸಿದರು.

(ಏಜೆನ್ಸೀಸ್)

2ನೇ ಆಷಾಢದ ಶುಕ್ರವಾರದ ಹಿನ್ನೆಲೆ ದೇವಿಗೆ ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳನ್ನು ದೇವಿಗೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇಂದು ದೇವಸ್ಥಾನದಲ್ಲಿ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net