ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ Darshan; ಇದೇ Hospital ಆಯ್ಕೆ ಮಾಡಲು ಕಾರಣವೇನು ಗೊತ್ತಾ?

Darshan
Published on

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಜೈಲು ಪಾಲಾಗಿದ್ದ ನಟ ದರ್ಶನ್​ (Darshan) ಆರೋಗ್ಯ ಸಮಸ್ಯೆಯ ಕಾರಣ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದು, ಇದೀಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇಲೆ ದರ್ಶನ್​ರನ್ನು (Darshan) ಬಳ್ಳಾರಿ ಸೆಂಟ್ರಲ್​ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದಾದ ಬಳಿಕ ನಟ ದರ್ಶನ್​ಗೆ (Darshan) ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಮಧ್ಯಂತರ ಜಾಮೀನಿನ ಮೇಲೆ ಹೊರಬಂದು ನಗರದ ಬಿಜಿಎಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಅಂದರೆ 2013ರಲ್ಲಿ ಬೃಂದಾವನ ಸಿನಿಮಾದ ಶೂಟಿಂಗ್​ ವೇಳೆ ಕುದುರೆ ಮೇಲಿಂದ ಬಿದ್ದಿದ್ದರಿಂದ ಅವರಿಗೆ ಬೆನ್ನು ನೋವು (Back Pain) ಕಾಣಿಸಿಕೊಂಡಿತ್ತು. ಈಗ ಮತ್ತೊಮ್ಮೆ ಬೆನ್ನು ನೋವು ತೀವ್ರವಾಗಿ ಕಾಣಿಸಿಕೊಂಡಿರುವ ಪರಿಣಾಮ ನಟ ದರ್ಶನ್​ ಬಿಜಿಎಸ್ (BGS) ​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೇ ಆಸ್ಪತ್ರೆ ಯಾಕೆ? 

ನಟ ದರ್ಶನ್ (Darshan)​ ಬಿಜಿಎಸ್​ (BGS) ಆಸ್ಪತ್ರೆಯನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣ ಇದೆ. ದರ್ಶನ್ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯಲು ನಿರ್ಧರಿಸಿದ್ರು. ಆದರೆ ಕೋರ್ಟ್​ ವ್ಯಾಪ್ತಿ ಬಿಟ್ಟು ಹೊರಗೆ ಹೋಗದಂತೆ ನ್ಯಾಯಾಲಯ ವಿಧಿಸಿದ ಷರತ್ತು ವಿಧಿಸಿದೆ. ಹೀಗಾಗಿ ಅವರು ಬೆಂಗಳೂರಿನ್ಲಲೇ ಚಿಕಿತ್ಸೆ ಪಡೆಯಲು ನಿರ್ಧರಿಸಿದ್ದಾರೆ.

Darshan

ಈ ಹಿಂದೆ ಬೆನ್ನು ನೋವು ಕಾಣಿಸಿಕೊಂಡಿದ್ದಾಗ ನಟ ದರ್ಶನ್​ (Darshan) ಮೈಸೂರಿನ ಅಪೋಲೋದಲ್ಲಿ ಚಿಕಿತ್ಸೆ ಪಡೆದಿದ್ದರು. ಮೈಸೂರು ಅಪೋಲೋದಲ್ಲೇ ಇದ್ದ ವೈದ್ಯರು ಇದೀಗ ಬಿಜಿಎಸ್​ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆಗೆ ಸಹಕಾರಿ ಆಗುತ್ತೆ ಎಂಬ ಕಾರಣಕ್ಕೆ ಅವರು ಬಿಜಿಎಸ್​ (BGS)  ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಜಮಾಯಿಸಿದ ಅಭಿಮಾನಿಗಳು 

ಇತ್ತ ನಟ ದರ್ಶನ್​ (Darshan) ಬಿಜಿಎಸ್​ ಆಸ್ಪತ್ರೆಗೆ ದಾಖಲಾಗುತ್ತಿರುವ ವಿಚಾರ ತಿಳಿದ ಅಭಿಮಾನಿಗಳು ಹಾಸ್ಪಿಟಲ್​ ಬಳಿ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ನೆಚ್ಚಿನ ನಟನನ್ನು ಕಂಡು ಘೋಷಣೆಗಳನ್ನು ಕೂಗಿದರು. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net