5 ಸಾವಿರ ಪ್ರಾಣಿಗಳಿಗಾಗಿ ಕೈಜೋಡಿಸಿ ಕೋರಿಕೊಂಡ ನಟ ದರ್ಶನ್​; ಚಾಲೆಂಜಿಂಗ್ ಸ್ಟಾರ್ ವಿನಂತಿ ಇಷ್ಟೇ...

Feat
Published on

ಮೈಸೂರು: ಕರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸಿನಿಮಾ ಕ್ಷೇತ್ರದ ಜನರಿಗಾಗಿ ಹಲವಾರು ಸ್ಟಾರ್​ ನಟರು ಮುಂದೆ ಬಂದು ಸಹಾಯ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅದೇ ರೀತಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಕೂಡ ಅಂಥದ್ದೊಂದು ಉದ್ದೇಶಕ್ಕಾಗಿ ಮುಂದೆ ಬಂದಿದ್ದಾರೆ. ಆದರೆ ಅವರು ಈಗ ಕೈಜೋಡಿಸಿ ಕೇಳಿಕೊಂಡಿರುವುದು ಮನುಷ್ಯರಿಗಾಗಿ ಅಲ್ಲ..!!

ಹೌದು.. ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ಪ್ರಾಣಿಪ್ರಿಯ ದರ್ಶನ್​ ಇದೀಗ ಮೃಗಾಲಯದ ಪ್ರಾಣಿಗಳ ಪರವಾಗಿ ದನಿ ಎತ್ತಿದ್ದಾರೆ. ಕರೊನಾದ ಕಾರಣದಿಂದಾಗಿ ಮೃಗಾಲಯಕ್ಕೂ ಸಂಕಷ್ಟ ಎದುರಾಗಿದ್ದು, ಪ್ರಾಣಿಗಳ ಬದುಕಿಗೂ ಕಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪ್ರಾಣಿಗಳ ಕುರಿತ ಪ್ರೀತಿಯನ್ನು ವ್ಯಕ್ತಪಡಿಸಿ ನೆರವಾಗಬೇಕು ಎಂಬುದಾಗಿ ಅವರು ವಿಡಿಯೋ ಮೂಲಕ ಕೋರಿಕೊಂಡಿದ್ದಾರೆ.

ಕರೊನಾದಿಂದಾಗಿ ಕರ್ನಾಟಕದ 9 ಮೃಗಾಲಯಗಳಿಗೂ ಸಮಸ್ಯೆ ಆಗಿದೆ. ಪ್ರವಾಸಿಗರು ಬರದೇ ಇರುವುದರಿಂದ ಈ ಮೃಗಾಲಯಗಳಲ್ಲಿರುವ ಒಟ್ಟು 5 ಸಾವಿರ ಪ್ರಾಣಿಗಳಿಗೆ ಕಷ್ಟ ಎದುರಾಗಿದೆ. ಹಾಗಂತ ಎಲ್ಲರೂ ಮನೆಯಲ್ಲಿ ಪ್ರಾಣಿ ಸಾಕಲು ಆಗುವುದಿಲ್ಲ. ಆದರೆ ಈ ಪ್ರಾಣಿಗಳನ್ನು ದತ್ತು ಪಡೆಯಬಹುದ. ಅದಕ್ಕಾಗಿ ವರ್ಷಕ್ಕೊಮ್ಮೆ ಮಾತ್ರ ಹಣ ಕೊಟ್ಟರೆ ಸಾಕು. ಅಲ್ಲದೆ ಆ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಕೂಡ ಸಿಗಲಿದೆ. ಸಾಧ್ಯವಿರುವ ಎಲ್ಲರೂ ಪ್ರಾಣಿಗಳನ್ನು ದತ್ತು ಪಡೆಯಬೇಕು ಎಂದು ಅವರು ಮೃಗಾಲಯದಲ್ಲಿ ಪ್ರಾಣಿಗಳ ಮುಂದೆ ನಿಂತುಕೊಂಡು ವಿಡಿಯೋ ಮೂಲಕ ಕೋರಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net