

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 7 ಮಂದಿ ಸೇರಿ ಚಿತ್ರದುರ್ಗದ ನಿವಾಸಿಯಾಗಿರುವ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ರದ್ದಾಗಿ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಗುರುವಾರ ರಾತ್ರಿ ದರ್ಶನ್ ಅವರನ್ನು ಪರಪ್ಪನ ಜೈಲಿಗೆ ಕಳುಹಿಸಲಾಗಿದೆ. ಇದೀಗ ನಟ ದರ್ಶನ್, ಜೈಲಿಂದಲೇ ತಮ್ಮ ಸೆಲೆಬ್ರೆಟಿಗಳಿಗೆ ಸಂದೇಶವೊಂದ್ನು ಕಳುಹಿಸಿದ್ದಾರೆ. ಇನ್ನೂ ದರ್ಶನ್ ನೀಡಿರುವ ಮೆಸೇಜ್ಅನ್ನು ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ವಿಜಯಲಕ್ಷ್ಮಿ ಅವರು ದರ್ಶನ್ ಅವರ ಫೋಟೋವನ್ನು ಶೇರ್ ಮಾಡಿ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ ಎಂದು ಬರೆದಿದ್ದಾರೆ
ನಿಮ್ಮ ಪ್ರೀತಿಯ ದಾಸ. ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.
ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುವುದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ಎಲ್ಲರಿಗೂ ನಮಸ್ಕಾರ