

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡು ಸೋಮವಾರ (ಅ.೧೪) ಅಂತಿಮ ಆದೇಶ ಹೊರಬೀಳಲಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಸರ್ಕಾರದ ಅಭಿಯೋಜಕ ಎಸ್‌ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ ೫೭ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಧೀಶ ಜೈಶಂಕರ್ ಅವರು ಸೋಮವಾರಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿದ್ದರು.
ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಆದೇಶವು ಸೋಮವಾರವೇ ಹೊರಬೀಳಲಿದೆ. ಒಂದು ವೇಳೆ ದರ್ಶನ್‌ಗೆ ಜಾಮೀನು ಸಿಗದಿದ್ದರೆ ಹೈಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆಯಿದೆ. ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ದರ್ಶನ್ ಆ್ಯಂಡ್ ಗ್ಯಾಂಗ್ ಅಪಹರಿಸಿ ಆರ್.ಆರ್.ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಭೀರಕವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿದ್ದಾರೆ.