ತೆರೆ ಮೇಲೆ ಬರಲಿದೆ ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌! ಈ ಸಿನಿಮಾಗೆ ಧನುಷ್ ಹೀರೋ... apj abdul kalam

apj abdul kalam
Published on

ಹೈದರಾಬಾದ್​:  ( apj abdul kalam ) ನಟ-ಚಲನಚಿತ್ರ ನಿರ್ಮಾಪಕ ಧನುಷ್, ಭಾರತದ ಅತ್ಯಂತ ಗೌರವಾನ್ವಿತ ಮತ್ತು ಸ್ಪೂರ್ತಿದಾಯಕ ವ್ಯಕ್ತಿಗಳಲ್ಲಿ ಒಬ್ಬರಾದ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜೀವನ ಚರಿತ್ರೆಯ ಚಿತ್ರ 'ಕಲಾಂ ದಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ' ಸಿನಿಮಾದಲ್ಲಿ ನಟಿಸಲಿದ್ದಾರೆ.

ಕೇನ್ಸ್ ಚಲನಚಿತ್ರೋತ್ಸವದಲ್ಲಿ ನಿರ್ದೇಶಕ ಓಂ ರಾವತ್ ಈ ಘೋಷಣೆ ಮಾಡಿದರು,  ಫಸ್ಟ್ ಲುಕ್ ಪೋಸ್ಟರ್ ಅನ್ನು ಸಹ ಅನಾವರಣಗೊಳಿಸಲಾಯಿತು. ಈ ಚಿತ್ರಕ್ಕೆ ‘ಕಲಾಂ: ದಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ’ ಅಂತ ಟೈಟಲ್ ಇಡಲಾಗಿದೆ. ಈ ಚಿತ್ರಕ್ಕೆ ‘ಆದಿಪುರುಷ್’ ಡೈರೆಕ್ಟರ್ ಓಂ ರಾವುತ್ ನಿರ್ದೇಶನ ಮಾಡಲಿದ್ದಾರೆ.

'ಕಲಾಂ: ದಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ' ಸಿನಿಮಾವನ್ನು ಅಭಿಷೇಕ್ ಅಗರ್ವಾಲ್‌ (ದಿ ಕಾಶ್ಮೀರ್ ಫೈಲ್ಸ್ ನಿರ್ಮಾಪಕ), ಭೂಷಣ್ ಕುಮಾರ್, ಕ್ರಿಷನ್ ಕುಮಾರ್, ಅನಿಲ್ ಸುಂಕರ ನಿರ್ಮಾಣ ಮಾಡುತ್ತಿದ್ದಾರೆ. ಸೈವಿನ್ ಕ್ವಾಡ್ರಾಸ್ ಅವರು ಈ ಸಿನಿಮಾಗೆ ಚಿತ್ರಕಥೆ ಬರೆಯುತ್ತಿದ್ದಾರೆ.

ಈ ಸಿನಿಮಾ ಬಗ್ಗೆ ಧನುಷ್ ರಿಯಾಕ್ಟ್ ಮಾಡಿ, ನಮ್ಮ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಸ್ಪೂರ್ತಿದಾಯಕ ಮತ್ತು ಉದಾತ್ತ ನಾಯಕನ ಜೀವನವನ್ನು ತೆರೆಮೇಲೆ ತರಲು ನಾನು ನಿಜವಾಗಿಯೂ ಧನ್ಯ ಮತ್ತು ಅತ್ಯಂತ ವಿನಮ್ರನಾಗಿದ್ದೇನೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net