ಚಿತ್ರಸಾಹಿತಿ, ಹಿರಿಯ ನಟ, ನಿರ್ದೇಶಕ ಸಿ.ವಿ.ಶಿವಶಂಕರ್ ವಿಧಿವಶ

cv shankar
Published on

ಬೆಂಗಳೂರು: ಕನ್ನಡ ಚಿತ್ರರಂಗದ ಗೀತರಚನೆಕಾರ, ನಿರ್ಮಾಪಕ, ಹಿರಿಯ ನಿರ್ದೇಶಕ ಸಿ. ವಿ .ಶಿವಶಂಕರ್ ಹೃದಯಾಘಾತದಿಂದ ನಿಧನವಾಗಿದ್ದಾರೆ.

ಸಿ. ವಿ .ಶಿವಶಂಕರ್ ಅವರಿಗೆ 90 ವರ್ಷವಾಗಿತ್ತು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶಿವಶಂಕರ್ ಅವರಿಗೆ ಹೃದಯಾಘಾತವಾಯಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಬದುಕುಳಿಯಲಿಲ್ಲ. ಸಿ.ವಿ. ಶಿವಶಂಕರ್​ ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸಿದ್ದು, ಅಂತ್ಯಕ್ರಿಯೆ ಬಗ್ಗೆ ಕುಟುಂಬಸ್ಥರು ಚರ್ಚಿಸಿ ನಿರ್ಧರಿಸಲಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮುಗಿಸಿದ್ದಾರೆ. ಆ ಬಳಿಕ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೂ, ಅವರು ಬದುಕುಳಿಯಲಿಲ್ಲ. ಶಿವಶಂಕರ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರದೇ ಇದ್ದರೂ, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಿನಿಮಾದಲ್ಲಿ ನಡೆದು ಬಂದ ಹಾದಿ: ಬಾಲನಟನಾಗಿ ರಂಗಭೂಮಿ ಪ್ರವೇಶ ಮಾಡಿದ್ದ ಸಿ.ವಿ ಶಿವಶಂಕರ್, ಬಾಲನಟರಾಗಿಯೇ ಅನೇಕ ನಾಟಕಗಳನ್ನು ಮಾಡಿದ್ದಾರೆ. ನಂತರ ಸಿನಿಮಾ ರಂಗವನ್ನು ಪ್ರವೇಶಿಸಿ, ರತ್ನ ಮಂಜಡಿ, ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿರುವ ಅವರು, ‘ಮನೆ ಕಟ್ಟಿ ನೋಡು’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದವರು. ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿಯೂ ಶಿವಶಂಕರ್ ಕೆಲಸ ಮಾಡಿದ್ದಾರೆ. ಸಿರಿವಂತನಾದರೂ, ಕನ್ನಡ ನಾಡಲ್ಲೇ ಮೆರೆವೆ.. ಭಿಕ್ಷುಕ ನಾದರು ಕನ್ನಡ ನಾಡಲ್ಲೇ ಮಡಿವೆ... ಖ್ಯಾತಿಯ ಶಿವಶಂಕರ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net