

ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಇತ್ತೀಚಿನ ಬೆಳವಣಿಗೆ ಕುರಿತು ಇದೀಗ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಟ್ವೀಟ್ ಮಾಡುವ ಮುಖೇನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣದ ಬಗ್ಗೆ ಇದೀಗ ದುನಿಯಾ ವಿಜಯ್ ಟ್ವೀಟ್ ಮಾಡಿದ್ದು, "ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ" ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
"ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ, ಯಾರು ಹೆಚ್ಚು ಸಮಯ ಮರೆಮಾಚಲಾಗದು - ಬುದ್ಧ" ಎಂದು ಬರೆದು ಪೋಸ್ಟ್ ಮಾಡಿದ್ದು, ತಮ್ಮ ಅಸಮಾಧಾನವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ.